International

ರಷ್ಯಾ-ಉಕ್ರೇನ್‌ ಗುಂಡಿನ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಗೆ ಗಾಯ-ಕೀವ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೀವ್: ಕೀವ್ ಮೇಲೆ ಹಿಡಿತ ಸಾಧಿಸಲು ರಷ್ಯಾ ತನ್ನ ದಾಳಿಯನ್ನು ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿರುವ ಹಲವು ಪ್ರಮುಖ ನಗರಗ್ಳ ಮೇಲೆ ಬಾಂಬ್‌ ದಾಳಿ ನಡೆಸಿ ಹಲವು ಕಟ್ಟಡಗಳನ್ನು ಧ್ವಂಸಗೊಳಿಸಿದೆ. ಕೀವ್ ನಗರ ರಷ್ಯಾ ಸೇನಾಪಡೆ ದಾಳಿಯಿಂದ ನಡುಗುತ್ತಿದೆ. ರಷ್ಯಾ ಮತ್ತು ಉಕ್ರೇನ್ ಸೈನಿಕರ ನಡುವೆ ಗುಂಡಿನ ದಾಳಿ ಮುಂದುವರೆದಿದೆ. ಈ  ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಆಕಸ್ಮಿಕವಾಗಿ ಗುಂಡು ತಗುಲಿದೆ.

ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಕೀವ್‌ನ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಯುದ್ಧ ಪ್ರದೇಶದಲ್ಲಿ ಯಾರೂ ಇರದಂತೆ ಮತ್ತು ಎಲ್ಲರೂ ಕೂಡಲೇ ಕೀವ್‌ ಪ್ರದೇಶವನ್ನು ತೊರೆಯಿರಿ ಎಂದು ಭಾರತೀಯ ರಾಯಭಾರಿ ಕಚೇರಿ ಈಗಾಗಲೇ ಎಚ್ಚರಿಕೆ ನೀಡಿದೆ.

ರಷ್ಯಾದ ದಾಳಿಯಲ್ಲಿ ರಾಜ್ಯದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬೆನ್ನಲ್ಲೇ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು ಗತುಲಿದೆ.  ಕೀವ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಕೇಂದ್ರ ಸಚಿವ ವಿಕೆ ಸಿಂಗ್ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Share Post