ರಷ್ಯಾದ ಮೂಲಕವೇ ಭಾರತೀಯರನ್ನು ಕರೆತರುವ ಪ್ರಯತ್ನ
ಕೀವ್; ಉಕ್ರೇನ್ನ ಖಾರ್ಕೀವ್ ಹಾಗೂ ಸುಮಿಯಲ್ಲಿ ಸಾವಿರಾರು ಭಾರತೀಯರು ಸಿಲುಕಿದ್ದಾರೆ. ಇಲ್ಲಿ ಹೆಚ್ಚು ಯುದ್ಧ ಆಗುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿರುವ ಭಾರತೀಯರನ್ನು ಭಾರತಕ್ಕೆ ಕರೆತರುವುದಕ್ಕೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ನೆರವು ಪಡೆದು ರಷ್ಯಾದ ಮೂಲಕವೇ ಭಾರತೀಯರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ.
ಉಕ್ರೇನ್ನ ಖಾರ್ಕಿವ್ ಮತ್ತು ಸುಮಿಯಿಂದ ರಷ್ಯಾದ ಬೆಲ್ಗೊರೊಡ್ ಪ್ರದೇಶಕ್ಕೆ ಭಾರತೀಯ ವಿದ್ಯಾರ್ಥಿಗಳು ಮತ್ತು ಇತರ ವಿದೇಶಿಯರನ್ನು ಸ್ಥಳಾಂತರಿಸಲು ರಷ್ಯಾದ 130 ಬಸ್ಗಳು ಸಿದ್ಧವಾಗಿವೆ ಎಂದು ರಷ್ಯಾದ ರಾಷ್ಟ್ರೀಯ ರಕ್ಷಣಾ ನಿಯಂತ್ರಣ ಕೇಂದ್ರದ ಮುಖ್ಯಸ್ಥ ಕರ್ನಲ್ ಜನರಲ್ ಮಿಖಾಯಿಲ್ ಮಿಜಿಂಟ್ಸೆವ್ ತಿಳಿಸಿದ್ದಾರೆ. ರಷ್ಯಾ ಮಾರ್ಗವಾಗಿ ಭಾರತೀಯರ ಏರ್ಲಿಫ್ಟ್ಗೆ ಪ್ರಯತ್ನ ನಡೆಸಲಾಗುತ್ತಿದೆ. ರಷ್ಯಾ ಗಡಿ ಬಳಿ ಭಾರತೀಯರನ್ನು ಕರೆತರಲು ಬಸ್ ವ್ಯವಸ್ಥೆ ಮಾಡಲಾಗಿದೆ. ಗಡಿಯಿಂದ ರಷ್ಯಾದ ಬೆಲ್ಗೊರೊಡ್ಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಲ್ಗೊರೊಡ್ನಿಂದ ಭಾರತಕ್ಕೆ ಏರ್ಲಿಫ್ಟ್ ಮಾಡಲು ಯೋಜನೆ ರೂಪಿಸಲಾಗಿದೆ.