CrimeNational

ಶ್ರೀನಗರದಲ್ಲಿ ಗ್ರೆನೇಡ್‌ ದಾಳಿ: ಪೊಲೀಸರು ಹಾಗೂ ಭದ್ರತಾ ಪಡೆ ಗುರಿಯಾಗಿಸಿ ದಾಳಿ

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಅಮೀರಾ ಕಡಲ್ ಮಾರುಕಟ್ಟೆಯಲ್ಲಿ ಭಾನುವಾರ ನಡೆದ ಗ್ರೆನೇಡ್ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.
ಗ್ರೆನೇಡ್ ದಾಳಿಯಲ್ಲಿ ಗಾಯಗೊಂಡವರಲ್ಲಿ ಓರ್ವ ಪೊಲೀಸ್‌ ಕೂಡ ಸೇರಿದ್ದಾರೆ. “ಸಂಜೆ 4:20 ರ ಸುಮಾರಿಗೆ, ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿರುವುದಾಗಿ” ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದಲ್ಲಿ ಓರ್ವ ಪೊಲೀಸ್ ಮತ್ತು 10 ನಾಗರಿಕರಿಗೆ ಗಾಯಗಳಾಗಿದ್ದು, ಅವರನ್ನು ಇಲ್ಲಿನ ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆದರೆ, ಒಬ್ಬ ನಾಗರಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಭದ್ರತಾ ಪಡೆಗಳು  ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Share Post