ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಆಪ್ತರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ
ಮುಂಬೈ: ಮಹಾರಾಷ್ಟ್ರದ ಆಡಳಿತಾರೂಢ ಪಕ್ಷ ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರದ ಸರ್ಕಾರದಲ್ಲಿ ಸಚಿವರಾಗಿರುವ ಆದಿತ್ಯ ಠಾಕ್ರೆ ಹಾಗೂ ಅನಿಲ್ ಪರಬ್ ಅವರ ಆಪ್ತರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಸಚಿವ ಆದಿತ್ಯ ಠಾಕ್ರೆ ಹಾಗೂ ಅನಿಲ್ ಪರಬ್ ಅವರ ಆಪ್ತರನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲಾಗಿದೆ. ಮುಂಬೈ, ಪುಣೆಗಳಲ್ಲಿ ಹೊಂದಿರುವ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಎಲ್ಲಾ ಕಡೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.