National

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ

ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಬಿಜೆಪಿ 263 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಸಮಾಜವಾದಿ ಪಾರ್ಟಿ 111 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ ಹಾಗೂ ಬಹುಜನ ಸಮಾಜ ಪಾರ್ಟಿ ತಲಾ ನಾಲ್ಕು ಸ್ಥಾನಗಳಲ್ಲಿ ಮುನ್ನಡೆಯಲ್ಲಿವೆ. ಇತರ ಪಕ್ಷಗಳು ಮೂರು ಸ್ಥಾನಗಳಲ್ಲಿ ಮುಂದಿವೆ. ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿಯಲು 202 ಸ್ಥಾನಗಳು ಬೇಕು. ಬಿಜೆಪಿ ಈಗಾಗಲೇ ಮ್ಯಾಜಿಕ್‌ ನಂಬರ್‌ ದಾಟಿದೆ. ಹೀಗಾಗಿ, ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ನೇತೃತ್ವದ ಸರ್ಕಾರ ಅಧಿಕಾರ ಹಿಡಿಯುವುದು ಪಕ್ಕಾ ಆಗಿದೆ.

 

ಉತ್ತರ ಪ್ರದೇಶ
403 ಸ್ಥಾನ/ ಮ್ಯಾಜಿಕ್‌ ನಂಬರ್‌ 202
ಬಿಜೆಪಿ – 263
ಎಸ್‌ಪಿ – 111
ಬಿಎಸ್‌ಪಿ – 04
ಕಾಂಗ್ರೆಸ್‌ – 04
ಇತರೆ – 03

 

Share Post