National

ರಾಜೀನಾಮೆಗೆ ಮುಂದಾದ ಪಂಜಾಬ್‌ ಸಿಎಂ-ರಾಜ್ಯಪಾಲರನ್ನು ಭೇಟಿ ಮಾಡಲಿರುವ ಚನ್ನಿ

ಗೋವಾ: ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ. ಪಂಜಾಬ್ ರಾಜ್ಯಪಾಲ ಭನ್ವರಿಲಾಲ್ ಪುರೋಹಿತ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ರಾಜ್ಯಪಾಲರ ಭೇಟಿಗಾಗಿ ಸಮಯ ಕೇಳಿದ್ದಾರೆ. ರಾಜ್ಯಪಾಲರ ಭೇಟಿಗಾಗಿ ಬೆಳಗ್ಗೆಯಿಂದ ಸಿಎಂ ಚನ್ನಿ ತಮ್ಮ ಅಧಿಕೃತ ನಿವಾಸದಲ್ಲಿ ಕಾಯುತ್ತಿದ್ದಾರೆ.

ಇದು ಪಂಜಾಬ್ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಚರಣಜಿತ್ ಸಿಂಗ್ ಅವರು ಚನ್ಕೌರ್ ಸಾಹಿಬ್ ಮತ್ತು ಭದೌರ್ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದ್ದಾರೆ.  ಈ ನಡುವೆ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಸಂಭ್ರಮ ಶುರುವಾಗಿದೆ. ಸಿಎಂ ಅಭ್ಯರ್ಥಿ ಭಾಗವತ್ ಮಾನ್ ಮನೆಯಲ್ಲಿ ಸಾಂಪ್ರದಾಯಿಕ ನೃತ್ಯ ಬಾಂಗ್ರಾ ಪ್ರದರ್ಶಿಸುತ್ತಾ.. ಜಿಲೇಬಿ ಮಾಡುತ್ತಾ ಸಂಭ್ರಮಾಚರಣೆಯಲ್ಲಿ ಮುಳುಗಿದ್ದಾರೆ. ಮನೆಯನ್ನು ಹೂವಿನಿಂದ ಅಲಂಕರಿಸಿ.. ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

88ಸ್ಥಾನಗಳನ್ನು ಪಡೆದು AAP ಭರ್ಜರಿ ಮುನ್ನಡೆ ಸಾಧಿಸಿದೆ. ಈ ನಡುವೆ ರಾಷ್ಟ್ರೀಯ ಪಕ್ಷ ಬಿಜೆಪಿ 5 ಸ್ಥಾನಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಮತ್ತೊಂದೆಡೆ ಕಾಂಗ್ರೆಸ್ 15ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದೆ.

Share Post