National

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿಜಯಯಾತ್ರೆ: ಇಂದು ಹೋಳಿ ಹಬ್ಬ ಎಂದ ಪ್ರಧಾನಿ

ದೆಹಲಿ:  ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ನಾಲ್ಕರಲ್ಲಿ ಬಿಜೆಪಿ  ವಿಜಯಯಾತ್ರೆ ಸಾಧಿಸಿದೆ. ಯುಪಿ ಮಾತ್ರವಲ್ಲ.. ಉತ್ತರಾಖಂಡದಲ್ಲೂ ಬಿಜೆಪಿ ಗೆದ್ದಿದೆ. ಯೋಗಿ ನೇತೃತ್ವದ ಯುಪಿಯಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಈ ವರ್ಷ ನಡೆದ ಯುಪಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಗೆದ್ದಿದೆ. ಐದು ರಾಜ್ಯಗಳ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಗೆಲುವಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಸಂಭ್ರಮಿಸುತ್ತಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ವಿಜಯೋತ್ಸವ ಸಮಾವೇಶಗಳು ನಡೆಯುತ್ತಿವೆ.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯನ್ನು ಗೆಲ್ಲಿಸಿದ ಜನತೆಗೆ ಧನ್ಯವಾದ ಅರ್ಪಿಸಿದರು. ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು,  ‘ಇಂದು ಪ್ರಜಾಪ್ರಭುತ್ವಕ್ಕೆ ಸಂಭ್ರಮದ ದಿನ.. ಈ ಚುನಾವಣೆಯ ಫಲಿತಾಂಶದಲ್ಲಿ ಮಹತ್ತರ ಸಂದೇಶವಿದೆ. ಈ ಬಾರಿ ಮಾರ್ಚ್ 10ಕ್ಕೆ ಹೋಳಿ ಹಬ್ಬ ಆರಂಭವಾಗಿದೆ. ಯುಪಿಯಲ್ಲಿ ಪಕ್ಷವೊಂದು 37 ವರ್ಷಗಳ ನಂತರ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವುದು ಸಂತೋಷದ ವಿಚಾರ. ಪ್ರಥಮ ಬಾರಿಗೆ ಮತದಾನ ಮಾಡಿದ ಯುವಕರು ಬಿಜೆಪಿಯನ್ನು ಬೆಂಬಲಿಸಿದ್ದಾರೆ ಎಂದರು.

ಉತ್ತರಾಖಂಡ, ಮಣಿಪುರ, ಗೋವಾದಲ್ಲಿ ಬಿಜೆಪಿ ಬಲ ಹೆಚ್ಚಿದೆ. ಉತ್ತರ ಪ್ರದೇಶ ಭಾರತಕ್ಕೆ ಹಲವು ಪ್ರಧಾನಿಗಳನ್ನು ನೀಡಿದೆ ಎಂದು ಮೋದಿ ನೆನಪು ಮಾಡಿಕೊಂಡರು. ಸಮಾಜವಾದಿ ಪಕ್ಷ ಎಷ್ಟೇ ಪ್ರಯತ್ನಿಸಿದರೂ ಜನ ಗೆಲ್ಲಲು ಬಿಡಲಿಲ್ಲ. ಉತ್ತರಾಖಂಡದಲ್ಲಿ ಬಿಜೆಪಿ ಇತಿಹಾಸ ಬರೆದು ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದೆ ಎಂದರು. ಉತ್ತಮ ಆಡಳಿತ ಮತ್ತು ಜನರ ಅಭಿವೃದ್ಧಿಯೇ ತಮ್ಮ ಗುರಿ ಎಂದು ಮೋದಿ ಸ್ಪಷ್ಟಪಡಿಸಿದರು.

ಗೋವಾದ ಜನತೆ ಬಿಜೆಪಿಗೆ ಮೂರನೇ ಬಾರಿ ಅಧಿಕಾರ ನೀಡಿದ್ದಾರೆ. ಬಿಜೆಪಿಯ ನಿರ್ಧಾರಗಳು ಮತ್ತು ನೀತಿಗಳಲ್ಲಿ ಸಾರ್ವಜನಿಕರ ವಿಶ್ವಾಸ ಹೆಚ್ಚಿದೆ. ದೇಶದಲ್ಲಿ ಬಡತನ ನಿರ್ಮೂಲನೆಗೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂಬ ಮಾತನ್ನು ಮೋದಿ ಹೇಳಿದ್ರು.

Share Post