National

ಡೀಸೆಲ್‌, ಪೆಟ್ರೋಲ್‌ ಬೆಲೆ ಏರಿಕೆ ಅನಿವಾರ್ಯವಾ..?; ಲೀಟರ್‌ಗೆ 15 ರೂಪಾಯಿ ಏರಿಕೆ..?

ನವದೆಹಲಿ: ಕಳೆದ ಎರಡು ತಿಂಗಳಿಂದ ತೈಲ ಕಂಪನಿಗಳು ಇಂಧನ ದರದಲ್ಲಿ ಸ್ಥಿರತೆ ಕಾಪಾಡಿಕೊಂಡಿದ್ದರಿಂದಾಗಿ ನಷ್ಟಕ್ಕೆ ಗುರಿಯಾಗಿವೆ. ಈ ಹಿನ್ನೆಲೆಯಲ್ಲಿ ಈಗ ತೈಲ ಬೆಲೆ ಏರಿಕೆ ಮಾಡುವ ಸಾಧ್ಯತೆ ಕಂಡುಬರುತ್ತಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 15 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಷ್ಯಾ–ಉಕ್ರೇನ್‌ ಯುದ್ಧ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರುತ್ತಲೇ ಇದೆ. ಆದರೂ ಕೂಡಾ ಭಾರತದಲ್ಲಿ ತೈಲ ಕಂಪನಿಗಳು ತೈಲ ದರವನ್ನು ಏರಿಕೆ ಮಾಡಿರಲಿಲ್ಲ. ಹೀಗಾಗಿ ಅವುಗಳು ನಷ್ಟಕ್ಕೀಡಾಗಿದೆ. ಈ ಹಿನ್ನೆಲೆಯಲ್ಲಿ ಈಗ ಪೆಟ್ರೋಲ್‌ ಡೀಸೆಲ್‌ ಬೆಲೆ ಏರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತೈಲ ಅಮದು ಮತ್ತು ರಫ್ತು ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರಿರುವುದರಿಂದ ಬೆಲೆ ಏರಿಕೆ ಅನಿವಾರ್ಯ ಎಂದು ತಜ್ಞರು ಹೇಳುತ್ತಿದ್ದಾರೆ.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದು, ಒಂದು ಡಾಲರ್‌ಗೆ 76.43 ರೂಪಾಯಿ ತಲುಪಿದೆ. ಒಂದು ಬ್ಯಾರಲ್‌ ಕಚ್ಚಾ ತೈಲ ದರ 116.6 ಡಾಲರ್‌ ಆಗಿದೆ. ಹೀಗಾಗಿ ನಷ್ಟ ಸರಿದೂಗಿಸಲು ಪೆಟ್ರೋಲ್‌ ಹಾಗೂ ಡೀಸೆಲ್‌ ದರವನ್ನು ಪ್ರತಿ ಲೀಟರ್‌ಗೆ ಹತ್ತರಿಂದ ಹದಿನೈದು ರೂಪಾಯಿ ಏರಿಕೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

Share Post