Bengaluru

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಬಿಜೆಪಿ ಸರ್ಕಾರದ ತಾರತಮ್ಯ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ನಿರಂತರವಾಗಿ ತಾರತಮ್ಯ ಮಾಡುತ್ತಿದೆ. ಮುಖ್ಯಮಂತ್ರಿಗಳು ಈ ತಾರತಮ್ಯವನ್ನು ಸರಿಪಡಿಸಬೇಕು ಅಥವಾ ಸಮಗ್ರ ಬೆಂಗಳೂರು ಅಭಿವೃದ್ಧಿ ಎಂದು ಹೇಳಿಕೊಳ್ಳುವ ಬದಲು, ಬಿಜೆಪಿ ಶಾಸಕರ ಕ್ಷೇತ್ರದ ಅಭಿವೃದ್ಧಿ ಎಂದು ಹೇಳಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಶಾಸಕರ 15 ಕ್ಷೇತ್ರಗಳಿಗೆ ಒಟ್ಟು 9888 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದು, ಕಾಂಗ್ರೆಸ್ ಶಾಸಕರ 12 ಕ್ಷೇತ್ರಗಳಿಗೆ 2,186.48 ಕೋಟಿ ರೂಪಾಯಿ ನೀಡಿದೆ. ಇನ್ನು ಜೆಡಿಎಸ್ ಶಾಸಕರಿರುವ ದಾಸರಹಳ್ಳಿಗೆ 288.5 ಕೋಟಿ ಕೊಟ್ಟಿದ್ದಾರೆ. ಆ ಮೂಲಕ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗಿಂತ 5 ಪಟ್ಟು ಹೆಚ್ಚಿನ ಅನಪದಾನವನ್ನು ಬಿಜೆಪಿಯವರಿಗೆ ನೀಡಲಾಗಿದೆ’ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಬೆಂಗಳೂರಿಗೆ 7,200 ಕೋಟಿ, ಸಮ್ಮಿಶ್ರ ಸರ್ಕಾರದಲ್ಲಿ 1 ಸಾವಿರ ಕೋಟಿ ಹಣವನ್ನು ವಿವಿಧ ಕ್ಷೇತ್ರಗಳಿಗೆ ಅನುದಾನವಾಗಿ ನೀಡಿತ್ತು. ಈ ಹಣವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಡಲಾಗಿದ್ದ ಅನುದಾವನ್ನು ಹಿಂಪಡೆದು ಮುಖ್ಯಮಂತ್ರಿಗಳ ನಗರೊತ್ಥಾನ ಮರುಹಂಚಿಕೆ ಮಾಡಲಾಗಿದೆ. ಇತ್ತೀಚೆಗೆ ಅಮೃತ್ ನಗರ ಯೋಜನೆ ಅಡಿಯಲ್ಲಿ 3600 ಕೋಟಿ ಕೊಟ್ಟಿದ್ದಾರೆ. 1500 ಕೋಟಿಯನ್ನು ಮಳೆ ನೀರು ಕಾಲುವೆಗಾಗಿ ನೀಡಲಾಗಿದೆ. ‘ಮುಖ್ಯಮಂತ್ರಿಗಳ ನಗರೋತ್ಥಾನ, ಅಮೃತ್ ನಗರ ಯೋಜನೆ ಹಾಗೂ ಬೃಹತ್ ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನ ಎಲ್ಲದರಲ್ಲೂ ಬಿಜೆಪಿ ಶಾಸಕರಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಮಳೆನೀರುಗಾಲುವೆಗೆ ನೀಡಲಾಗಿರುವ ಅನುದಾನದಲ್ಲಿ ಬಿಟಿಎಂ ಹಾಗೂ ಜಯನಗರ ಕ್ಷೇತ್ರಗಳಿಗೆ ಶೂನ್ಯ ಅನುದಾನ ಕೊಟ್ಟಿದ್ದಾರೆ’ ಎಂದು ಕಿಡಿಕಾರಿದರು.

Share Post