Districts

ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲ್ಲ, ನಾಲ್ಕೈದು ಕ್ಷೇತ್ರದಿಂದ ಆಫರ್‌ ಇದೆ; ಸಿದ್ದರಾಮಯ್ಯ

ಮಂಡ್ಯ: ನಾನು ಯಾವುದೇ ಕಾರಣಕ್ಕೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡೋದಿಲ್ಲ. ನನಗೆ ನಾಲ್ಕೈದು ಕ್ಷೇತ್ರಗಳಿಂದ ಆಫರ್‌ ಇದೆ. ಯಾವುದರಲ್ಲಿ ನಿಲ್ತೇನೆ ಎಂಬುದನ್ನು ಇನ್ನೂ ಫೈನಲ್‌ ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಮಾತನಾಡಿದ ಅವರು, ನನಗೆ ನಾಲ್ಕೈದು ಕ್ಷೇತ್ರದ ಜನ ಕರೆಯುತ್ತಿದ್ದಾರೆ. ಅಲ್ಲಿನ ಸ್ಥಳೀಯ ಮುಖಂಡರು ನಮ್ಮ ಕ್ಷೇತ್ರದಲ್ಲೇ ನಿಲ್ಲಿ ಎಂದು ಪಟ್ಟು ಹಿಡಿದಿದ್ದಾರೆ. ಆದರೆ ನಾನು ಯೋಚನೆ ಮಾಡಿ ಯಾವ ಕ್ಷೇತ್ರದಲ್ಲಿ ನಿಲ್ಲಬೇಕು ಎಂಬುದನ್ನು ತೀರ್ಮಾನ ಮಾಡುತ್ತೇನೆ. ಆದರೆ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಪಕ್ಷದಿಂದ ಕಾಂಗ್ರೆಸ್​ಗೆ ಎಷ್ಟು ಜನ ಬರುತ್ತಾರೆ ಕಾದು ನೋಡಿ. ಕಾಂಗ್ರೆಸ್ ತೊರೆದು ಯಾರು ಬಿಜೆಪಿ ಸೇರಲ್ಲ. ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದರು.

Share Post