ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ಬಿಬಿಎಂಪಿ ವಿರುದ್ಧ ಆಕ್ರೋಶ
ಬೆಂಗಳೂರು: ರಸ್ತೆ ಗುಂಡಿಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ನಿನ್ನೆ ರಾತ್ರಿ ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ಬೈಕ್ ಸವಾರ ಅಶ್ವಿನ್ ಎಂಬಾತ ರಸ್ತೆ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ.
ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಅಶ್ವಿನ್ ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಬೆಳಗಿನಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಶ್ವಿನ್ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಜಾಗದಲ್ಲಿ ಅಶ್ವಿನ್ ಸ್ನೇಹಿತರು ಜಮಾಯಿಸಿದ್ದಾರೆ. ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಅಂತ ಆಕ್ರೋಶ ಕೇಳಿಬಂದಿದೆ. ಅಶ್ವಿನ್, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ತಾಯಿಗೆ ಒಬ್ಬನೇ ಮಗ ಅಶ್ವಿನ್. ಮೂಲತಃ ಹಾವೇರಿಯವರು ಎಂದು ತಿಳಿದುಬಂದಿದೆ. ಅಲ್ಲದೆ ಅಪಘಾತದದ ಬಳಿಕ ಆ್ಯಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆಯಾದ್ರೂ ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆರೋಪಿದ್ದಾರೆ. ಕೊನೆಗೆ ಸ್ಥಳೀಯರೇ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿದ್ದರು ಎಂದು ತಿಳಿದುಬಂದಿದೆ.