National

ಹಿಜಾಬ್‌ ವಿವಾದ; ಹೈಕೋರ್ಟ್‌ ತೀರ್ಪು ಸ್ವಾಗತಿಸಿದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

ನವದೆಹಲಿ: ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸ್ವಾಗತಿಸಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಆಡಳಿತ ಮಂಡಳಿಗಳು ಜಾರಿ ಮಾಡಿರುವ ವಸ್ತ್ರ ಸಂಹಿತೆಗಳನ್ನು ವಿದ್ಯಾರ್ಥಿನಿಯರು ಪಾಲಿಸಬೇಕು ಎಂದಿದ್ದಾರೆ. ಹೈಕೋರ್ಟ್ ತೀರ್ಪು, ಸದ್ಯ ನಡೆಯುತ್ತಿರುವ ಹಿಜಾಬ್ ವಿವಾದಗಳಿಗೆ ತೆರೆ ಎಳೆಯಲಿದೆ ಮತ್ತು ಹೆಣ್ಣುಮಕ್ಕಳು ಶಿಕ್ಷಣ ಮುಂದುವರಿಸಲು ಅನುವು ಮಾಡಿಕೊಡಲಿದೆ‘ ಎಂದು ನಂಬುತ್ತೇನೆ ಎಂದು ರೇಖಾ ಶರ್ಮಾ ಹೇಳಿದ್ದಾರೆ.

‘ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರವಿಲ್ಲ’ಎಂದು ನ್ಯಾಯಪೀಠದ ಮೂವರೂ ಸದಸ್ಯರು ಸಂಪೂರ್ಣ ಸಹಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ.

Share Post