National

ಪಂಚರಾಜ್ಯಗಳಲ್ಲಿ ಹೀನಾಯ ಸೋಲು; ಐದೂ ಕಾಂಗ್ರೆಸ್‌ ಅಧ್ಯಕ್ಷರ ರಾಜೀನಾಮೆಗೆ ಸೂಚನೆ

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಐದೂ ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆದೇಶ ನೀಡಿದ್ದಾರೆ. ಅದರಲ್ಲಿ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಕೂಡಾ ಸೇರಿದ್ದಾರೆ. 

ಪಂಜಾಬ್​ನಲ್ಲಿ ಆಮ್ ಆದ್ಮಿ ಪಾರ್ಟಿ  ವಿರುದ್ಧ ಕಾಂಗ್ರೆಸ್ ಹೀನಾಯ ಸೋಲು ಕಂಡಿತು. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ್‌, ಮಣಿಪುರಗಳಲ್ಲೂ ಕಾಂಗ್ರೆಸ್‌ ಹೀನಾಯ ಪ್ರದರ್ಶನ ನೀಡಿತ್ತು. ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಉತ್ತರ ಪ್ರದೇಶದಲ್ಲಿ ನೂರಾರು ಸಭೆಗಳನ್ನು ನಡೆಸಿದರೂ ಕೂಡಾ ಅಲ್ಲೂ ಕಾಂಗ್ರೆಸ್​ ನಾಲ್ಕು ಸ್ಥಾನ ಗಳಿಸಲು ಪರದಾಡಬೇಕಾಯಿತು. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್​ ನಾಯಕತ್ವದ ಸಭೆ ನಡೆಸಿದ ಸೋನಿಯಾ ಗಾಂಧಿ ಐದೂ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ಆದೇಶಿಸಿದ್ದಾರೆ.

Share Post