Bengaluru

ಬೆಳ್ಳಂಬೆಳಗ್ಗೆ ACB ಶಾಕ್;‌ 18 ಅಧಿಕಾರಿಗಳ ಆಸ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ..!

ಬೆಂಗಳೂರು: ಭ್ರಷ್ಟ ಅಧಿಕಾರಿಗಳು ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್‌ ನೀಡಿದ್ದಾರೆ. ರಾಜ್ಯದ 18 ಅಧಿಕಾರಿಗಳ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದ್ದು, ಒಟ್ಟು 78 ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. 

ಏಕಕಾಲಕ್ಕೆ 200ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ ರೇಡ್ ಮಾಡಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದ್ದು, ಕೆಲವರ ಮನೆಗಳಲ್ಲಿ ಲಕ್ಷ ಲಕ್ಷ ನಗದು ಹಣ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಯಾವ ಅಧಿಕಾರಿಗಳ ಆಸ್ತಿಗಳ ಮೇಲೆ ದಾಳಿ..?

  1. ಜ್ಞಾನೇಂದ್ರಕುಮಾರ್, ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು
  2. ರಾಕೇಶ್ ಕುಮಾರ್ BDA, ಪಟ್ಟಣ ಯೋಜನೆ
  3. ರಮೇಶ ಕಣಕಟ್ಟೆ, ಆರ್.ಎಫ್.ಓ. ಸಾಮಾಜಿಕ ಅರಣ್ಯ, ಯಾದಗಿರಿ
  4. ಬಸವರಾಜ ಶೇಖರ ರೆಡ್ಡಿ ಪಾಟೀಲ್, ಕಾರ್ಯನಿರ್ವಾಹಕ ಅಭಿಯಂತರ, ಕೌಜಲಗಿ ವಿಭಾಗ, ಗೋಕಾಕ
  5. ಬಸವ ಕುಮಾರ್ ಎಸ್. ಅಣ್ಣಿಗೇರಿ, ಶಿರಸ್ತೇದಾರ್, ಡಿಸಿ ಕಛೇರಿ, ಗದಗ
  6. ಗೋಪಿನಾಥ್ ಸಾ ಎನ್ ಮಾಳಗಿ, ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ, ವಿಜಯಪುರ
  7. ಬಿ ಕೆ ಶಿವಕುಮಾರ್, ಹೆಚ್ಚುವರಿ ಡಿಟೆಕ್ಟರ್, ಇಂಡಸ್ಟ್ರಿವ್ಸ್ ಮತ್ತು ಕಾಮರ್ಸ್, ಬೆಂಗಳೂರು
  8. ಶಿವಾನಂದ್ ಪಿ ಶರಣಪ್ಪ ಖೇಡಗಿ, RFO, ಬಾದಾಮಿ
  9. ಮಂಜುನಾಥ್, ಸಹಾಯಕ ಆಯುಕ್ತ, ರಾಮನಗರ
  10. ಶ್ರೀನಿವಾಸ್, ಜನರಲ್ ಮ್ಯಾನೇಜರ್, ಸಮಾಜ ಕಲ್ಯಾಣ ಇಲಾಖೆ
  11. ಮಹೇಶ್ವರಪ್ಪ, ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ
  12. ಕೃಷ್ಣನ್ ಎಇ, ಎಪಿಎಂಸಿ, ಹಾವೇರಿ
  13. ಚಲುವರಾಜ್, ಅಬಕಾರಿ ನಿರೀಕ್ಷಕರು, ಗುಂಡ್ಲುಪೇಟೆ ತಾಲೂಕು
  14. ಗಿರೀಶ್, ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಸುವಿವಿಭಾಗ
  15. ಬಾಲಕೃಷ್ಣ ಹೆಚ್ ಎನ್, ಪೊಲೀಸ್ ಇನ್ಸ್ ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು
  16. ಗವಿರಂಗಪ್ಪ, ಎಇಇ, ಪಿಡಬ್ಲ್ಯೂಡಿ, ಚಿಕ್ಕಮಂಗಳೂರು
  17. ಅಶೋಕ್ ರೆಡ್ಡಿ ಪಾಟೀಲ್, ಎಇಇ, ಕೃಷ್ಣ ಭಾಗ್ಯ ಜಲ ನಿಗಮ ಲಿ, ದೇವದುರ್ಗ ರಾಯಚೂರು
  18. ದಯಾ ಸುಂದರ್ ರಾಜು, AEE, KPTCL, ದಕ್ಷಿಣ ಕನ್ನಡ
Share Post