Bengaluru

ನೆಲ, ಜಲ, ಭಾಷೆ ವಿಚಾರವನ್ನು ಲಘುವಾಗಿ ಪರಿಗಣಿಸುವುದಿಲ್ಲ-ಆರಗ ಜ್ಞಾನೇಂದ್ರ

ಬೆಂಗಳೂರು: ಬೆಳಗಾವಿ ಅಧಿವೇಶನದ ವೇಳೆ ಶಿವಸೇನೆ ಪುಂಡಾಟ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಅಡಿದ ಅವರು, ಎಂಇಎಸ್‌ ಪುಂಡಾಟಿಕೆಯನ್ನು ಸರ್ಕಾರ ಲಘುವಾಗಿ ಪರಿಗಣಿಸುವುದಿಲ್ಲ. ನೆಲ, ಜಲ, ಭಾಷೆ ವಿಚಾರವನ್ನು ಅಷ್ಟು ಸುಲಭವಾಗಿ ತೆಗೆದು ಹಾಕುವುದಿಲ್ಲ. ಎಂಇಎಸ್‌ ಪುಂಡರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಶಿವಸೇನೆ ಪುಂಡಾಟಿಕೆಯಿಂದ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟಾಗಿತ್ತು. ಸದನದಲ್ಲಿ ಖಂಡನಾ ನಿರ್ಣಯ ತೆಗೆದುಕೊಂಡಿದ್ದು ನಿಜ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೆಂದು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ.

ಯಾವುದೇ ಕಾರಣಕ್ಕೂ ಈ ವಿಚಾರವನ್ನು ಇಲ್ಲಿಗೆ ಬಿಡುವು ಮಾತೇ ಇಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇ ಬೇಕು. ಈಗಾಗಲೇ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ. ಖಂಡಿತವಾಗಿಯೂ ಆರೋಪಿಗಳಿಗೆ ಶಿಕ್ಷೆ ಆಗುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ರು.

Share Post