Bengaluru

ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುತ್ತೇವೆ-ಸಾರಿಗೆ ಸಚಿವ ಶ್ರೀರಾಮುಲು

ಬೆಂಗಳೂರು: ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದಿರುವ ಭೀಕರ ರಸ್ತೆ ಅಪಘಾತದ ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.  ಈ ದುರಂತ ಘಟನೆ ನಡೆಯಬಾರದಿತ್ತು. ಆದರೆ ನಡೆದಿದೆ. ಕೂಡಲೇ ಅಧಿಕಾರಿಗಳಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ಕೊಟ್ಟಿದ್ದೇನೆ. ಓವರ್‌ ಲೋಡ್‌ ಅಥವಾ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುತೇನೆ ಎಂದಿದ್ದಾರೆ

ಈ ಖಾಸಗಿ ಬಸ್‌ಗೆ ಪರ್ಮಿಟ್‌ ಕೊಟ್ಟ ಆರ್‌ಟಿಓ ಅಧಿಕಾರಿ ಮೇಲೆ ಆಕ್ಷನ್‌ ತೆಗೆದುಕೊಳ್ಳುತ್ತೇವೆ. ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಪರಿಹಾರ ಕೊಡಿಸುವ ಬಗ್ಗೆ ಸಿಎಂ ಬಳಿ ಮಾತನಾಡುತ್ತೇನೆ. ಈ ಭಾಗದಲ್ಲಿ ಸರ್ಕಾರಿ ಬಸ್‌ ಸೌಲಭ್ಯ ಇಲ್ಲ ಎಂದು ಕೇಳಿಬಂದಿದೆ ಕೂಡಲೇ ಆ ಹಳ್ಳಿಗಳಿಗೆ ಸರ್ಕಾರಿ ಬಸ್‌ಗಳನ್ನು ಒದಗಿಸುವ ಕೆಲಸ ಮಾಡ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.

ಪಳವಳ್ಳಿ ಬಳಿ ಖಾಸಗಿ ಬಸ್‌ ಪಲ್ಟಿಯಾಗಿ 8ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳದಿಂದ ಬಸ್‌ ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಅಪಾರ ಸಾವು-ನೋವುಗಳು ಉಂಟಾಗಿವೆ. ಪೊಲೀಸರು ಹಾಗೂ ಆಸ್ಪತ್ರೆ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Share Post