ಭಗವದ್ಗೀತೆ, ಕುರಾನ್, ಬೈಬಲ್ಗೂ ನಮ್ಮ ತಕರಾರಿಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿ ಭಗವದ್ಗೀತೆಯನ್ನಾದರೂ ಹೇಳಿಕೊಡಲಿ, ಕುರಾನ್, ಬೈಬಲ್ ನ್ನಾದರೂ ಹೇಳಿಕೊಡಲಿ, ಅದಕ್ಕೆ ನಮ್ಮ ತಕರಾರಿಲ್ಲ ಎಂದು ಹೇಳಿದ್ದಾರೆ.
ನೈತಿಕ ಶಿಕ್ಷಣದ ಅಗತ್ಯವಿದೆ ಹಾಗಂತ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದಲ್ಲ. ಭಗವದ್ಗೀತೆ, ಕುರಾನ್ ಯಾವುದಕ್ಕೂ ನಮ್ಮ ವಿರೋಧವಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಬೇಕಾದ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಿ ಎಂಬುದು ನಮ್ಮ ಆಗ್ರಹ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ತಿಳಿಸಿದರು. ಇದು ಬಹುಸಂಸ್ಕೃತಿ ಇರುವ ರಾಷ್ಟ್ರ. ನಾವೆಲ್ಲರೂ ಒಟ್ಟಿಗೆ ಸಾಗಬೇಕು. ಆ ನಿಟ್ಟಿನಲ್ಲಿ ಸಂವಿಧಾನದ ಸಹಿಷ್ಣತೆ, ಸಹಬಾಳ್ವೆಯಲ್ಲಿ ನಂಬಿಕೆಯನ್ನಿಟ್ಟು ಕೊಂಡಿರಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಸಾಗಬೇಕು ಎಂದು ಸಿದ್ದರಾಮಯ್ಯ ಹೇಳಿದರು.