ಉಕ್ರೇನ್‌ನಿಂದ ವಾಪಸಾದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೇಂದ್ರ ದೃಷ್ಠಿ..
ದೆಹಲಿ: ಕೇಂದ್ರ ಸರ್ಕಾರ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಅಧ್ಯಯನಕ್ಕೆ ಯಾವುದೇ ತೊಂದರೆಯಾಗದಂತೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಕೇಂದ್ರವು ಆಲೋಚನೆಗಳನ್ನು ಮಾಡುತ್ತಿದೆ. ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಮತ್ತು ಅವರ ಶಿಕ್ಷಣದ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ದಾಖಲಾಗಿವೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.
ಇದರ ಭಾಗವಾಗಿ 22,500 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸಲಾಗಿದೆ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಕೊಟ್ರು. ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ನ್ಯಾಯಮೂರ್ತಿ ಎನ್.ವಿ.ರಮಣ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ತೊಂದರೆಯಿಲ್ಲದೆ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಸೂಕ್ತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವುದಾಗಿ ಕೋರ್ಟ್ ಮುಂದೆ ಹೇಳಿದ್ರು.
ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ಯಶಸ್ವಿಯಾದ ಕಾರಣ ಶಿಕ್ಷಣದ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸ್ಪಷ್ಟಪಡಿಸಿದ ನಂತರ ನ್ಯಾಯಮೂರ್ತಿ ರಮಣ ಪೀಠವು ವಿಚಾರಣೆಯನ್ನು ಮುಕ್ತಾಯಗೊಳಿಸಿತು.