National

ಹೋಳಿ ಹಬ್ಬದ ವೇಳೆ ನಕಲಿ ಮಧ್ಯ ಸೇವನೆ; 37 ಮಂದಿ ದುರ್ಮರಣ..!

ಪಾಟ್ನಾ(ಬಿಹಾರ್​): ಹೋಳಿ ಹಬ್ಬದ ಸಂಭ್ರಮದಲ್ಲಿ ನಕಲಿ ಮದ್ಯ ಸೇವಿಸಿದ್ದ 37 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದಲ್ಲಿ ನಡೆದಿದೆ. ಒಂದೇ ದಿನ ಬೇರೆ ಪ್ರಕರಣಗಳಲ್ಲಿ ಒಟ್ಟು 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

   ಒಟ್ಟು ಮೂರು ಜಿಲ್ಲೆಗಳಲ್ಲಿ ಹೋಳಿ ಆಚರಣೆ ವೇಳೆ ಅಕ್ರಮ ಹಾಗೂ ನಕಲಿ ಮದ್ಯ ಸೇವನೆ ಮಾಡಿದ್ದಾರೆ. ಇದ್ರಿಂದ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.  ಭಾಗಲ್ಪುರ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು ಸಂಭವಿಸಿವೆ. ಶನಿವಾರ ಬೆಳಗ್ಗೆಯಿಂದ ಈವರೆಗೆ ಭಾಗಲ್ಪುರ ಜಿಲ್ಲೆಯಲ್ಲಿ ಒಟ್ಟು 22 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ಬಂಕಾ ಜಿಲ್ಲೆಯಲ್ಲಿ 12 ಮಂದಿ ಹಾಗೂ ಮಾಧೇಪುರದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

   ಪ್ರಾಥಮಿಕ ತನಿಖೆಯ ಪ್ರಕಾರ ಕೆಲವರು ವಿಷಪೂರಿತ ಮದ್ಯ ಸೇವಿಸಿ ಸಾವನ್ನಪ್ಪಿದ್ದರೆ, ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರ ನಿಖರ ಮಾಹಿತಿ ತಿಳಿದು ಬರಬೇಕಿದೆ ಎಂದು ಪೊಲೀಸ್​​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಛಿಬ್ರಮೌ ಕೊಟ್ವಾಲಿ ಪ್ರದೇಶದ ಕಟಾಹರ್ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ತಕ್ಷಣ ಎಸ್ಪಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share Post