National

ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ಗೆ ಮತ್ತೆ ನ್ಯಾಯಾಂಗ ಬಂಧನ

ಮುಂಬೈ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ಗೆ ಬಿಡುಗಡೆಯ ಭಾಗ್ಯ ಇಲ್ಲ. ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ಏಪ್ರಿಲ್ 4 ರವರೆಗೆ ವಿಸ್ತರಣೆ ಮಾಡಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ಮುಖಂಡ, ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್‌ ಮಲಿಕ್‌ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ನ್ಯಾಯಾಂಗ ಬಂಧನದ ಅವಧಿಯಲ್ಲಿ ಹಾಸಿಗೆ, ಕುರ್ಚಿಯ ಸೌಲಭ್ಯ ನೀಡಬೇಕು ಎಂದು ಮಲಿಕ್‌ ಮಾಡಿರುವ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್‌ ಮಲಿಕ್‌ ಅವರನ್ನು ಫೆಬ್ರುವರಿ 23 ರಂದು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿತ್ತು. ತಮ್ಮ ವಿರುದ್ಧ ಇ.ಡಿ. ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮನವಿ ಮಾಡಿ ಮತ್ತು ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದನ್ನು ಪ್ರಶ್ನಿಸಿ ಮಲಿಕ್ ಅವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

Share Post