National

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ; ಮತ್ತೆ ʻಗ್ಯಾಸ್‌ʼ ಟ್ರಬಲ್‌..!

ನವದೆಹಲಿ: ನಾಲ್ಕು ತಿಂಗಳ ಬಳಿಕ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯಾಗಿದೆ. ಅಡುಗೆ ಅನಿಲದ ದರ ಸಿಲಿಂಡರ್‌ ಒಂದಕ್ಕೆ ಬರೋಬ್ಬರಿ 50 ರೂಪಾಯಿ ಹೆಚ್ಚಿಸಲಾಗಿದೆ. ಇನ್ನು ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ ತಲಾ 80 ಪೈಸೆ ಏರಿಕೆ ಮಾಡಲಾಗಿದೆ. ಇದರಿಂದಾಗಿ, ಲೀಟರ್ ಪೆಟ್ರೋಲ್ ಬೆಲೆ 96.21 ರೂ.ಆಗಿದ್ದು, ಲೀಟರ್‌ ಡೀಸೆಲ್‌ಗೆ 87.47 ರೂಪಾಯಿ ಆಗಿದೆ.

  2021ರ ನವೆಂಬರ್‌ 2ರಂದು ಕೊನೆಯ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿತ್ತು. ಅನಂತರ ತೈಲ ಬೆಲೆ ಏರಿಕೆ ಮಾಡಿರಲಿಲ್ಲ. ಕೆಲ ದಿನಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದರೂ, ತೈಲೆ ಬೆಲೆ ಏರಿಕೆ ಮಾಡಿರಲಿಲ್ಲ. 2021ರ ನವೆಂಬರ್‌ ನಂತರ ಕಚ್ಚಾ ತೈಲ ಬೆಲೆಗಳು ಶೇ.25 ರಷ್ಟು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಈಗ ತೈಲ ಬೆಲೆ ಏರಿಸಲಾಗುತ್ತಿದೆ.

  ಇನ್ನು ಅಡುಗೆ ಅನಿಲ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಿಸಲಾಗಿದೆ. ಕಳೆದ ವಾರ ಸರ್ಕಾರ ಸಗಟು ಡೀಸೆಲ್ ಬೆಲೆಯನ್ನು ಲೀಟರ್‌ಗೆ 25 ರೂಪಾಯಿಗಳಷ್ಟು ಹೆಚ್ಚಿಸಿದೆ. ಜನವರಿಯಿಂದ ವಿಮಾನ ಇಂಧನವು ಶೇ. 50 ರಷ್ಟು ಹೆಚ್ಚಾಗಿದೆ. ಮಾರ್ಚ್ 10 ರಂದು ಚುನಾವಣಾ ಫಲಿತಾಂಶಗಳು ಹೊರಬಂದ ನಂತರ ಬೆಲೆ ಏರಿಕೆ ಬಗ್ಗೆ ಮಾತುಗಳು ಕೇಳಿಬರುತ್ತಿದ್ದವು. ಕೊನೆಗೂ ಇಂದು ತೈಲ ಬೆಲೆ ಏರಿಕೆ ಕಂಡಿದ್ದು, ಗ್ರಾಹಕರಿಗೆ ಹೊರೆಯಾಗಿದೆ.

Share Post