ಬೆಳ್ಳಂಬೆಳಗ್ಗೆ ಭ್ರಷ್ಟರ ಬೆವರಿಳಿಸಿದ ಎಸಿಬಿ ಅಧಿಕಾರಿಗಳು: ನಗರದ ಒಂಭತ್ತು ಕಡೆ ರೇಡ್
ಬೆಂಗಳೂರು: ಇಂದು ಬೆಳಗ್ಗೆಯೇ ಎಸಿಬಿ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಮುಂದಾಗಿದ್ದಾರೆ. ರಾಜಧಾನಿ ಬೆಂಗಳೂರಿನ ಒಂಭತ್ತು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಅಧಿಕಾರಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ಡನೆಸಿದ್ದು, ಮಧ್ವರ್ತಿಗಳು ಹಾಗೂ ಏಜೆಂಟ್ಗಳ ಮೂಲಕ ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿರುವ ಶಂಕಿತರ ಮೇಲೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಒಂಭತ್ತು ಕಡೆ ದಾಳಿ ನಡೆಸಿದ್ದಾರೆ. ಸುಮಾರು ನೂರು ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ದಾಳಿ ಮಾಡಿದ್ದು, ಈಗಾಗಲೇ ಕೆಜಿಗಟ್ಟಲೆ ಚಿನ್ನ, ಬೆಳ್ಳಿ, ನಗದು ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಾಮರಾಜಪೇಟೆಯ ಬಿ.ಎನ್.ರಘು, R.T.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.