SSLC ಪರೀಕ್ಷೆ ಹಿನ್ನೆಲೆ 15ದಿನಗಳ ಕಾಲ ನಿಷೇಧಾಜ್ಞೆ ಜಾರಿ: ಕಮಲ್ ಪಂತ್
ಬೆಂಗಳೂರು: ಪ್ರೌಢಶಿಕ್ಷಣ ಮಂಡಳಿಯಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರಿಕ್ಷೆಯ ಕಾ ರಣದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ. ಶಾಲಾ ಸುತ್ತಮುತ್ತ 200ಮೀಟರ್ ವರೆಗೆ ನಿಷೇಧಾಜ್ಞೆಯನ್ನು ಜಾರಿಮಾಡಲಾಗಿದೆ. ಸುತ್ತಮುತ್ತ ಯಾವುದೇ ಅಂಗಡಿ-ಮುಂಗಟ್ಟುಗಳು, ಜೆರಾಕ್ಸ್, ಬುಕ್ ಸ್ಟೋರ್ ಎಲ್ಲವೂ ಬಂದ್ ಮಾಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಮಾಡಿದ್ದಾರೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ 15ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡುವಂತೆ ಆದೇಶಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 28 – ಪ್ರಥಮ ಭಾಷೆ
ಮಾರ್ಚ್ 30 – ದ್ವಿತೀಯ ಭಾಷೆ,
ಏಪ್ರಿಲ್ 1 – ಅರ್ಥ ಶಾಸ್ತ್ರ, ಕೋರ್ ಸಬ್ಜೆಕ್ಟ್,
ಏಪ್ರಿಲ್ 4 – ಗಣಿತ, ಸಮಾಜಶಾಸ್ತ್ರ,
ಏಪ್ರಿಲ್ 6 – ಸಮಾಜ ವಿಜ್ಞಾನ,
ಏಪ್ರಿಲ್ 8- ತೃತೀಯ ಭಾಷೆ,
ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ಸಮಯ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ. ಕೊರೊನಾ ಹಿನ್ನೆಲೆ ಎಲ್ಲಾ ಮಕ್ಕಳಿಗೂ ಈಗಾಗಲೇ ವ್ಯಾಕ್ಸಿನ್ ನೀಡಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಪಾಳನೆ ಎಲ್ಲಾ ಗಮನದಲ್ಲಿಟ್ಟುಕೊಂಡು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸ್ಯಾನಿಟೈಸ್ ಮತ್ತು ಮುಂಜಾಗ್ರತಾ ಕ್ರಮಗಳನ್ನು ಶಿಕ್ಷಣ ಇಲಾಖೆ ತೆಗೆದುಕೊಳ್ಳುವುದಾಗಿ ತಿಳಿಸಿದೆ.
ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ
ಎಸ್ಎಸ್ಎಲ್ಸಿ ಪರೀಕ್ಷಾ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್ಆರ್ಟಿಸಿ ಬಸ್ ಪ್ರಯಾಣವನ್ನು ನೀಡಲಾಗಿದೆ. ಈ ಬಗ್ಗೆ KSRTC ಈಗಾಗಲೇ ಗೋಷಣೆ ಮಾಡಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸುವಂತೆ ಅನುಮತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿಯೇ ಬಸ್ ನಿಲ್ಲಿಸುವುದಾಗಿ ಕೆಎಸ್ಆರ್ಟಿಸಿ ಅಧಿಕಾರಿಗಳುತಿಳಿಸಿದ್ದಾರೆ.