National

ಹೀರೋ ಮೋಟೊಕಾರ್ಪ್‌ ಹಿರಿಯ ಅಧಿಕಾರಿಗಳ ಮನೆ ಮೇಲೆ ಐಟಿ ದಾಳಿ..!

ನವದೆಹಲಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೀರೋ ಮೋಟೋ ಕಾರ್ಪ್‌ನ ಹಿರಿಯ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. 

 ಹೀರೋ ಮೋಟೋಕಾರ್ಪ್​ ಅಧ್ಯಕ್ಷ ಪವನ್ ಮುಂಜಾಲ್ ಮತ್ತು ಕಂಪನಿಯ ಹಲವು ಹಿರಿಯ ಅಧಿಕಾರಿಗಳು ಮತ್ತು ಅವರ ಸಂಪರ್ಕಿತರ ನಿವಾಸಗಳು ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿಯಾಗಿದೆ. ಗುರುಗ್ರಾಮ್, ಹರಿಯಾಣ, ದೆಹಲಿಯಲ್ಲಿರುವ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಲಾಗಿದೆ.

Share Post