National

ಲಾಲೂ ಪ್ರಸಾದ್‌ ಯಾದವ್‌ಗೆ ಅನಾರೋಗ್ಯ: ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು

ದೆಹಲಿ: ಬಿಹಾರದ ಮಾಜಿ ಸಿಎಂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಗ್ಯ ಮತ್ತೆ ಹದಗೆಟ್ಟಿದೆ. ಬುಧವಾರ (ಮಾರ್ಚ್ 23, 2022) ಮುಂಜಾನೆ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದರಿಂದ ಲಾಲು ಅವರನ್ನು ಡಿಸ್ಚಾರ್ಜ್‌ ಮಾಡಲಾಗಿತ್ತು. ಆದರೆ ಪುನಃ ಅವರ ಆರೋಗ್ಯ ಹದಗೆಟ್ಟ ಕಾರಣ ಮತ್ತೆ ದೆಹಲಿಗೆ ಕರೆದೊಯ್ಯಲಾಗಿದೆ. ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಲಾಲು ಪ್ರಸಾದ್ ಯಾದವ್ಗೆ ರಾಂಚಿಯ RIMS ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಂಜೆ ವೇಳೆಗೆ ಅವರ ಆರೋಗ್ಯ ಹಠಾತ್ ಹದಗೆಟ್ಟಿದ್ದರಿಂದ ದೆಹಲಿಯ ಏಮ್ಸ್‌ಗೆ ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಅವರನ್ನು ಏಮ್ಸ್‌ಗೆ ಕರೆದೊಯ್ಯಲಾಗಿತ್ತು. ದೆಹಲಿಯ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ರಾತ್ರಿಯಿಡೀ ನಿಗಾ ಇರಿಸಲಾಗಿತ್ತು. ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಬುಧವಾರ ಬೆಳಗಿನ ಜಾವ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ವಿಶೇಷ ವಿಮಾನದಲ್ಲಿ ರಾಂಚಿಯ ರಿಮ್ಸ್‌ಗೆ ವಾಪಸಾಗುತ್ತಿದ್ದ ಲಾಲು ಅವರ ಆರೋಗ್ಯ ಸ್ಥಿತಿ ಮತ್ತೊಮ್ಮೆ ಹದಗೆಟ್ಟಿದ್ದರಿಂದ ಅವರನ್ನು ದೆಹಲಿಗೆ ಸ್ಥಳಾಂತರಿಸಲಾಯಿತು. ಸದ್ಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೇವು ಹಗರಣದಲ್ಲಿ ಡೊರಾಂಡಾ ಖಜಾನೆಯಿಂದ 139 ಕೋಟಿ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.  ಮೇವು ಹಗರಣದ ಜೊತೆಗೆ ಡೊರಾಂಡಾ ಖಜಾನೆ ಅಪಹರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಜೈಲು ಪಾಲಾಗಿದ್ದರು. ಜೈಲಿನಲ್ಲಿದ್ದಾಗ ಲಾಲು ಅವರ ಆರೋಗ್ಯ ಹದಗೆಟ್ಟಿದ್ದರಿಂದ ರಿಮ್ಸ್‌ಗೆ ತೆರಳಿದ್ದರು. ಅವರನ್ನು ಚಿಕಿತ್ಸೆಗಾಗಿ ಜನವರಿ 2021 ರಲ್ಲಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

Share Post