Districts

ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ: ಜಾತ್ರೆಗೆ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೈಕ್‌ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ. ಬಿ.ದುರ್ಗಾ ಗ್ರಾಮದ ನಾಗರಾಜ್ (43), ಪತ್ನಿ ಶೈಲಜಾ (38), ಪುತ್ರ ವೀರೇಶ್ (15), ಸಂತೋಷ (13) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ನಿನ್ನೆ ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದಲ್ಲಿ ಜಾತ್ರೆ ಇತ್ತು. ಈ ಕಾರಣದಿಂದಾಗಿ ನಾಗರಾಜ್‌ ಅವರು ಕುಟುಂಬ ಸಮೇತ ಬೈಕ್‌ನಲ್ಲಿ ಜಾತ್ರೆಗೆ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ಕಳೆದ ರಾತ್ರಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ದುರಂತ ನಡೆದಿದೆ. ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಬಲಬದಿಗೆ ನುಗ್ಗಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Share Post