ಪೂರ್ವ ಗೋದಾವರಿಯ ಅನ್ನವರಂ ಯೂನಿಯನ್ ಬ್ಯಾಂಕ್‌ನಲ್ಲಿ ಅಗ್ನಿ ಅವಘಡ: ಬ್ಯಾಂಕ್ ಲಾಕರ್ಸ್ ಸೇಫ್
ಆಂಧ್ರಪ್ರದೇಶ: ಪೂರ್ವ ಗೋದಾವರಿ ಜಿಲ್ಲೆಯ ಅನ್ನವರಂ ಯೂನಿಯನ್ ಬ್ಯಾಂಕ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗುರುವಾರ (ಮಾರ್ಚ್ 24,2022) ಬೆಳಿಗ್ಗೆ 8.30 ರ ಸುಮಾರಿಗೆ ಶಾರ್ಟ್ ಸೂಟ್‌ನೊಂದಿಗೆ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಂಕಿನಲ್ಲಿ ಬೆಂಕಿ ಧಗಧಗ ಹೊತ್ತಿ ಉರಿಯುವುದನ್ನು ಕಂಡ ಸ್ಥಳೀಯರು ಕೂಡಲೇ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ರು. ಸದ್ಯ ಬೆಂಕಿ ಹತೋಟಿಗೆ ಬಂದಿದ್ದು, ಬ್ಯಾಂಕ್ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಈ ಬೆಂಕಿಯ ಕೆನ್ನಾಲಿಗೆಗೆ ಬ್ಯಾಂಕಿನಲ್ಲಿದ್ದ ಪೀಠೋಪಕರಣಗಳು ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿವೆಯಂತೆ.
ಆದರೆ ನಗದು, ದಾಖಲೆ ಪತ್ರಗಳು ಹಾಗೂ ಚಿನ್ನ ಸಂಗ್ರಹಿಸಿಟ್ಟಿರುವ ಲಾಕರ್ ಸುರಕ್ಷಿತವಾಗಿವೆ ಎಂದು ಮಾಹಿತಿ ನೀಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಅಪಘಾತದಿಂದ ಉಂಟಾದ ಹಾನಿಯ ಬಗ್ಗೆ ಅಧಿಕಾರಿಗಳು ಮೌಲ್ಯಮಾಪನ ಮಾಡುವ ನಿರೀಕ್ಷೆಯಿದೆ. ಬೆಂಕಿ ಹೊತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಗ್ರಾಹಕರು ಬ್ಯಾಂಕ್ ಮುಂದೆ ಜಮಾಯಿಸಿದ್ದರು. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.