Districts

ಮೈಸೂರು: ಪರೀಕ್ಷೆ ಬರೆಯುವಾಗ ಹೃದಯಾಘಾತ – ವಿದ್ಯಾರ್ಥಿನಿ ಸಾವು

ಮೈಸೂರು: ಇವತ್ತಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಈ ದುರ್ಘಟನೆ ನಡೆದಿದೆ.

ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ‌‌ ಮೃತಪಟ್ಟ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ‌‌ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

Share Post