National

ಉಕ್ರೇನ್‌ನ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕರಿಸಿ: ಮೋದಿಗೆ ಕೆಸಿಆರ್‌ ಪತ್ರ

ತೆಲಂಗಾಣ:  ಸಿಎಂ ಕೆಸಿಆರ್ ಪ್ರಧಾನಿ ಮೋದಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಉಕ್ರೇನ್‌ನ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡುವಂತೆ ತೆಲಂಗಾಣ ಸಿಎಂ ಕೆಸಿಆರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪ್ರಧಾನಿಗೆ ಪತ್ರ ಬರೆದ ಕೆಸಿಆರ್, 700 ತೆಲಂಗಾಣ ವಿದ್ಯಾರ್ಥಿಗಳು ಸೇರಿದಂತೆ ದೇಶಾದ್ಯಂತ ಸುಮಾರು 20,000 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದಾರೆ.

ಉಕ್ರೇನ್‌ನ ತೆಲಂಗಾಣ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಬೇರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಲು ಕೇಂದ್ರ ಸಹಕಾರ ನೀಡಬೇಕು ಎಂದು ಸಿಎಂ ಕೆಸಿಆರ್ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Share Post