Bengaluru

ಎಲ್ಲಾ ಬೆಳವಣಿಗೆಗಳಿಗೂ ಸರ್ಕಾರದ ಕುಮ್ಮಕ್ಕಿದೆ; ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಆಜಾನ್‌ ಕೂಗಲು ಮಸೀದಿಗಳಲ್ಲಿ ಧ್ವನಿರ್ವಧಕ ಬಳಕೆಗೆ ಕೆಲವರು ವಿರೋಧಿಸುತ್ತಿದ್ದಾರೆ. ಇದಲ್ಲದೆ ಇತ್ತೀಚಿನ ದಿನಗಳಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿದ್ದು ಸಮಾಜದ ಶಾಂತಿ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಈ ಎಲ್ಲಾ ಬೆಳವಣಿಗೆಗಳೂ ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ ಎಂದು ವಿಪಕ್ಷ ನಾಯ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ, ಮುಖ್ಯಮಂತ್ರಿ ಮೌನವಾಗಿದ್ದಾರೆ. ಅಷ್ಟೇ ಅಲ್ಲದೆ ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಸರ್ಕಾರಕ್ಕೆ ಗೊತ್ತಿಲ್ಲದೆ ಆರ್.ಎಸ್.ಎಸ್ ಮತ್ತು ಬಜರಂಗದಳ ಇಷ್ಟೆಲ್ಲಾ ಮಾಡುತ್ತಾ? ಎಂದು ಸಿದ್ದರಾಮಯ್ಯ ಇದೇ ವEಳೆ ಪ್ರಶ್ನೆ ಮಾಡಿದರು. ದೇವಸ್ಥಾನ, ಮಸೀದಿ, ಚರ್ಚ್ ಹೀಗೆ ಎಲ್ಲ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ. ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ತಕರಾರು ತೆಗೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಇದೇ ವೇಳೆ ದೂರಿದರು.

Share Post