Bengaluru

ರಾಜಕೀಯ ಲಾಭಕ್ಕಾಗಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ; ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿವರ್ಧಕಗಳನ್ನು ಹಾಕುತ್ತಾರೆ. ಇದರಿಂದ ಇಷ್ಟು ದಿನ ಯಾರಿಗೆ ತೊಂದರೆಯಾಗಿತ್ತು.? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದು ಬೀಳುತ್ತಿದೆ. ಆದರೂ ಅಂತಹವರ ವಿರುದ್ಧ ಕ್ರಮ ಕೈಗೊಳ್ಳದಷ್ಟು ಸಿಎಂ ಅಸಮರ್ಥರಾಗಿದ್ದಾರೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

 

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕೋಮು ಸಾಮರಸ್ಯ ಕದಡುವ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಿದೆ. ಆ ಮೂಲಕ ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದೆ. ಈ ಲೆಕ್ಕಾಚಾರವೇ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಲಿತು ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

Share Post