ಶಿವಸೇನೆ ನಾಯಕ ಸಂಜಯ್ ರಾವತ್ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ
ಮುಂಬೈ: ಶಿವಸೇನೆ ನಾಯಕ, ಸಂಸದ ಸಂಜಯ್ ರಾವತ್ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಸಾವಿರಾರು ಕೋಟಿ ಪತ್ರಾ ಚಾಲ್ ಭೂ ಹಗರಣ ಆರೋಪದ ಹಿನ್ನೆಲೆಯಲ್ಲಿ ಸಂಜಯ್ ರಾವತ್ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ತಿಳಿದುಬಂದಿದೆ.
ಸಂಜಯ್ ರಾವತ್ ಅವರ ಅಲಿಬಾಗ್ನಲ್ಲಿರುವ 8 ನಿವೇಶನಗಳು ಮತ್ತು ಮುಂಬೈನ ದಾದರ್‌ನಲ್ಲಿರುವ ಒಂದು ಫ್ಲ್ಯಾಟ್ ಅನ್ನು ಜಪ್ತಿ ಮಾಡಿದೆ. ಅಲ್ಲದೇ ಸಂಜಯ್ ರಾವತ್ ಅವರ ಆಪ್ತ ಸ್ನೇಹಿತ ಪ್ರವೀಣ್ ರಾವತ್ ಅವರನ್ನು ಇಡಿ ಬಂಧಿಸಿದೆ. ಕೇಂದ್ರ ಹಣಕಾಸು ತನಿಖಾ ಸಂಸ್ಥೆಯು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಮೀನು ಮತ್ತು ಫ್ಲ್ಯಾಟ್‌ಗಳನ್ನು ಫ್ರೀಜ್ ಮಾಡಲು ಅನುಮತಿಯನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.