ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ?
ನವದೆಹಲಿ: ಮುಂದಿನ ತಿಂಗಳು ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಾರಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಲು ಕರ್ನಾಟಕ ಹಾಗೂ ರಾಜಸ್ಥಾನಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿತ್ತು. ಆದ್ರೆ, ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ಹೆಚ್ಚು ಬಿಸಿಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಎಲ್ಲಾ ಕೇಂದ್ರ ಸಚಿವರು, ಬಿಜೆಪಿ ಆಡಳಿತಾರೂಢ ರಾಜ್ಯಗಳ ಎಲ್ಲಾ ಮುಖ್ಯಮಂತ್ರಿಗಳು, ಎಲ್ಲಾ ಸಂಸದರು, ಎಲ್ಲಾ ಬಿಜೆಪಿ ಶಾಸಕರು, ಎಲ್ಲಾ ನಗರಸಭೆ ಅಧ್ಯಕ್ಷರು-ಅಧ್ಯಕ್ಷರು-ಉಪಾಧ್ಯಕ್ಷರು ಈ ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿಯಲ್ಲಿ ಇದೇ ಮೊದಲ ರಾಷ್ಟ್ರೀಯ ಕೌನ್ಸಿಲ್ ಸಭೆಯಾಗಿದೆ.