Bengaluru

ಬೆಲೆ ಏರಿಕೆಗೆ ಖಂಡನೆ; ಏಪ್ರಿಲ್‌ 11 ರಂದು ಕಾಂಗ್ರೆಸ್‌ನಿಂದ ಬೃಹತ್‌ ಹೋರಾಟ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಏಪ್ರಿಲ್‌ 11 ರಂದು ಬೃಹತ್‌ ಪ್ರತಿಬಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‌ 11 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಅಂದು ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುತ್ತದೆ. ಈಗಾಗಲೇ ನಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ. ರಾಜ್ಯಾದ್ಯಂತ ಪ್ರತಿಭಟನೆ ಮಾಡಿ, ಬೆಲೆ ಏರಿಕೆಉನ್ನು ಖಂಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

 

Share Post