ಜಾರ್ಖಂಡ್ ರೋಪ್ವೇ ದುರಂತ ಪ್ರಕರಣ; ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆ
ದೇವಘರ್: ಜಾರ್ಖಂಡ್ನ ದೇವಘರ್ನಲ್ಲಿ ಕೇಬಲ್ ಕಾರುಗಳಲ್ಲಿ ಸಿಲುಕಿದ್ದವರಲ್ಲಿ ಮಹಿಳೆಯೊಬ್ಬರು ಕಾರ್ಯಾಚರಣೆ ವೇಳೆ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಇದ್ರಿಂದಾಗಿ ಈ ದುರ್ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಸದ್ಯ ಎಲ್ಲ ಪ್ರವಾಸಿಗರನ್ನು ರಕ್ಷಿಸಲಾಗಿದೆ. ಆದರೆ, ರಕ್ಷಣಾ ಕಾರ್ಯಾಚರಣೆಯ ವೇಳೆ ಹೆಲಿಕಾಪ್ಟರ್ನೊಳಗೆ ಎಳೆದುಕೊಳ್ಳುವಾಗ ಮಹಿಳೆ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ತ್ರಿಕೂಟ ಬೆಟ್ಟಗಳ ವಲಯದಲ್ಲಿ ರೋಪ್ವೇ ಕಾರುಗಳ ನಡುವೆ ಅಪಘಾತ ಸಂಭವಿಸಿ, ರೋಪ್ವೇ ನಲ್ಲೇ 15 ಪ್ರವಾಸಿಗರು ಸುಮಾರು 40 ಗಂಟೆಗಳು ಸಿಲುಕಿದ್ದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ಗಳ ಮೂಲಕ ನಡೆಸಲಾದ ಕಾರ್ಯಾಚರಣೆಯಲ್ಲಿ ಇಂದು ಹದಿನಾಲ್ಕು ಜನರನ್ನು ರಕ್ಷಿಸಲಾಗಿದೆ. ರೋಪ್ವೇನಲ್ಲಿ ಸಿಲುಕಿದ್ದ 15 ಜನರ ಪೈಕಿ 14 ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಮಹಿಳೆಯೊಬ್ಬರು ಹೆಲಿಕಾಪ್ಟರ್ನಿಂದ ಕೆಳಗೆ ಬಿದ್ದಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಕೆ.ಮಲ್ಲಿಕ್ ಹೇಳಿದ್ದಾರೆ. ಹೆಲಿಕಾಪ್ಟರ್ನಿಂದ ಕೆಳಗೆ ಬಿದ್ದ 60 ವರ್ಷ ವಯಸ್ಸಿನ ಶೋಭಾ ದೇವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.