Districts

ಈಶ್ವರಪ್ಪ ಕಾರಿಗೆ ಕಾಂಗ್ರೆಸ್‌ ಕಾರ್ಯಕರ್ತರ ಮುತ್ತಿಗೆ; ವಾಗ್ವಾದ

ಶಿವಮೊಗ್ಗ: ಸಚಿವ ಈಶ್ವರಪ್ಪ ಅವರು ಸುದ್ದಿಗೋಷ್ಠಿ ಮುಗಿಸಿ ಹೋಗುತ್ತಿದ್ದಾಗ ಕಾರ್ಯಕರ್ತರು ಈಶ್ವರಪ್ಪ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸಂತೋಷ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

Share Post