National

ಆಂಧ್ರದ ಏಲೂರು ಬಳಿ ಬೆಂಕಿ ದುರಂತ; ಆರು ಮಂದಿ ದುರ್ಮರಣ

ಅಮರಾವತಿ: ಆಂಧ್ರ ಪ್ರದೇಶದ ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಆರು ಮಂದಿ ದಾರುಣ ಸವಿಗೀಡಾಗಿದ್ದಾರೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಫೋರಸ್‌ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಸಿಲುಕು ಆರು ಕಾರ್ಮಿಕರು ಸಾವನ್ನಪ್ಪಿದ್ದರೆ, ಇನ್ನೂ ಹನ್ನೆರಡು ಮಂದಿ ತೀವ್ರವಾಗಿ ಸುಟ್ಟು ಗಾಯಗೊಂಡಿದ್ದಾರೆ. ಕಾರ್ಖಾನೆಯ ಯೂನಿಟ್‌ 4ರಲ್ಲಿ ರಿಯಾಕ್ಟರ್‌ ಸ್ಫೋಟಗೊಂಡಿದ್ದರಿಂದ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಈ ಸಮಯದಲ್ಲಿ ಫ್ಯಾಕ್ಟರಿಯಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಗಾಯಗೊಂಡವರಲ್ಲಿ ಕೆಲವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಎಲ್ಲರನ್ನೂ ವಿಜಯವಾಡ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

 

Share Post