Districts

ಗುತ್ತಿಗೆದಾರ ಸಂತೋಷ್‌ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ

ಬೆಳಗಾವಿ: ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್​ ಮೃತದೇಹವನ್ನು ಬೆಳಗಾವಿ ತಾಲೂಕಿನ ಸ್ವಗ್ರಾಮ ಬಡಸಕ್ಕೆ ತರಲಾಗಿದೆ.

    ಪ್ರಕರಣ ಸಂಬಂಧ ಉಡುಪಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಸ್ಥಳ ಮಹಜರು ನಡೆಸಿದ ನಂತರ, ಮಣಿಪಾಲ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅನಂತರ ಮೃತದೇಹವನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಸ್ವಗ್ರಾಮಕ್ಕೆ ತರಲಾಗಿದೆ. ಗ್ರಾಮದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಆತ್ಮಹತ್ಯೆ ಸಂಬಂಧ ಸಚಿವ ಈಶ್ವರಪ್ಪ ಮತ್ತು ಅವರ ಇಬ್ಬರು ಆಪ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಲ್ಲದೆ, ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು, ಗುತ್ತಿಗೆದಾರರ ಸಂಘಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಸಂತೋಷ್ ಪಾಟೀಲ್​ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ರಾಜ್​ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದರು.

Share Post