Bengaluru

ನಾಳೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ; ಸಚಿವ ಈಶ್ವರಪ್ಪ

ಶಿವಮೊಗ್ಗ; ನಾಳೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಪ್ರಕಟಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇನೆ. ನಾಳೆ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಹೇಳಿದ್ದರು.

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು ಹಿಡಿದಿತ್ತು. ಆದ್ರೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಈಶ್ವರಪ್ಪ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ. ನಾನು ತಪ್ಪು ಮಾಡಿಲ್ಲ ಎಂದು ಹೇಳಿದ್ದರು. ಆದ್ರೆ ಇವತ್ತು ದಿಢೀರ್‌ ಅಂತ ಸುದ್ದಿಗೋಷ್ಠಿ ನಡೆಸಿದ ಅವರು ನಾಳೆ ಸಿಎಂಗೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಪ್ರಕಟಿಸಿದ್ದಾರೆ.

ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿರುವ ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಖಾತೆ ಸಿಕಿದ್ದು ನನ್ನ ಅದೃಷ್ಟ. ನಾನು ನನಗೆ ಸಿಕ್ಕ ಖಾತೆಯನ್ನು ಉತ್ತಮವಾಗಿ ನಿಭಾಯಿಸಿದ್ದೇನೆ. ತಪ್ಪು ಮಾಡಿದ್ದರೆ ದೇವರು ನನಗೆ ಶಿಕ್ಷೆ ನೀಡಲಿ ಎಂದರು.

ನನಗೆ ಪೂರ್ಣ ವಿಶ್ವಾಸವಿದೆ, ದೇವರೆ ಮೇಲೆ ನಂಬಿಕೆ ಇದೆ. ಒಂದೇ ಒಂದು ಪರ್ಸೆಂಟ್‌ ನನ್ನ ತಪ್ಪಿದ್ದರೆ ಸಾಬೀತಾಗಲಿ. ಸಾಬೀತಾದರೆ ನಾನು ಶಿಕ್ಷೆ ಅನುಭವಿಸಲು ಸಿದ್ಧ ಎಂದು ಹೇಳಿದರು.

Share Post