ರಾಜೀನಾಮೆ ದಿನವೂ ಶಕ್ತಿ ಪ್ರದರ್ಶಿಸ್ತಾರಾ ಸಚಿವ ಕೆ.ಎಸ್.ಈಶ್ವರಪ್ಪ..?
ಶಿವಮೊಗ್ಗ; ಸಚಿವ ಕೆ.ಎಸ್.ಈಶ್ವರಪ್ಪ ಇಂದು ಸಂಜೆ ಆರು ಗಂಟೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶಿವಮೊಗ್ಗದಲ್ಲಿರುವ ಈಶ್ವರಪ್ಪ ಅವರು ರಸ್ತೆ ಮಾರ್ಗದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ವೇಳೆ ನೂರಾರು ವಾಹನಗಳು, ಬೆಂಬಲಿಗರ ಜೊತೆ ಈಶ್ವರಪ್ಪ ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿದುಬಂದಿದೆ.
ಈಶ್ವರಪ್ಪ ಅವರ ಜೊತೆ ಅವರ ಪುತ್ರ ಕೂಡಾ ಬೆಂಗಳೂರಿಗೆ ಬರಲಿದ್ದಾರೆ. ಸಂಜೆ ಆರು ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಭೇಟಿಯಾಗಲಿರುವ ಈಶ್ವರಪ್ಪ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಅನಂತರ ರಾತ್ರಿ 11 ಗಂಟೆಗೆ ರೈಲಿನಲ್ಲಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.