ಹುಬ್ಬಳ್ಳಿ ಗಲಭೆ ಪ್ರಕರಣ; ಸಂಬಂಧಿಸಿದವರನ್ನೆಲ್ಲಾ ಬಂಧಿಸಲಾಗಿದೆ; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಶನಿವಾರ ರಾತ್ರಿ ನಡೆದ ಹುಬ್ಬಳ್ಳಿ ಗಲಬೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನೂ ಈಗಾಗಲೇ ಬಂಧಿಸಲಾಗಿದೆ. ಇಂದರ ಹಿಂದೆ ಯಾವ ನಾಯಕರಿದ್ದಾರೆ. ಇದಕ್ಕೆ ಪ್ರಚೋದನೆ ನೀಡಿದವರು ಯಾರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನೂ ಕ್ರಮ ಖಂಡಿತ ಆಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಪ್ಪಿತಸ್ಥರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಆಗೇ ಆಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದ ಕುರಿತು ಮಾತನಾಡಿದ ಸಿಎಂ, ನಾವೇ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ. ಬೇರೆ ಸರ್ಕಾರವಾದರೆ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು ಎಂದು ಹೇಳಿದರು.