ಹುಬ್ಬಳ್ಳಿ ಗಲಭೆ ಪ್ರಕರಣ; ವಿಡಿಯೋ ಹರಿಬಿಟ್ಟ ಅಭಿಷೇಕ್‌ಗೆ ಏ.30ರವರೆಗೆ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ವಿವಾದಾತ್ಮಕ ಅನಿಮೆಟೆಡ್ ವಿಡಿಯೋವನ್ನು ವಾಟ್ಸ್‌ಆ್ಯಪ್ ಸ್ಟೇಟಸ್‌ಗೆ ಹಾಕಿಕೊಂಡು ಗಲಭೆಗೆ ಕಾರಣನಾಗಿದ್ದ ಆರೋಪಿ ಅಭಿಷೇಕ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಹುಬ್ಬಳ್ಳಿ ನಗರ ಕೋರ್ಟ್ ಆದೇಶ ಹೊರಡಿಸಿದೆ. ಅಭಿಷೇಕ್ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ನಾಳೆ ಸರ್ಕಾರಿ ವಕೀಲರಿಂದ ತಕರಾರು ಅರ್ಜಿ ಸಲ್ಲಿಸಲಾಗುತ್ತದೆ.
ಆರೋಪಿ ಅಭಿಷೇಕ್, ವಿಡಿಯೋ ಒಂದನ್ನು ತಿರುಚಿ ವಾಟ್ಸ್ ಆಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಈ ವಿಚಾರವಾಗಿಯೇ ಶುರುವಾದ ಗಲಾಟೆ, ಪೊಲೀಸ್ ಸ್ಟೇಷನ್ ಮೇಲೆ ದಾಳಿ ನಡೆಸುವವರೆಗೂ ಹೋಗಿದೆ. ಇನ್ನು ಇದೇ ಕಾರಣಕ್ಕೆ ಹಳೇ ಹುಬ್ಬಳ್ಳಿಯಲ್ಲಿ ಏ. 16ರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಬಂಧಿಸಿರುವ 89 ಆರೋಪಿಗಳನ್ನು, ಹುಬ್ಬಳ್ಳಿಯ ಕೋರ್ಟ್‌ಗೆ ಸೋಮವಾರ ಹಾಜರುಪಡಿಸಿದ್ದಾರೆ.