Districts

ಪಿಎಸ್‌ಐ ನೇಮಕಾತಿ ಅಕ್ರಮ ಅಕ್ರಮ ಪ್ರಕರಣ; ಶೀಘ್ರದಲ್ಲೇ ದಿವ್ಯಾ ಹಾಗರಗಿ ಬಂಧನ – ಸಿಎಂ ಬೊಮ್ಮಾಯಿ

ಕಲಬುರಗಿ: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಆರೋಪಿ ಹಾಗೂ ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ದಿವ್ಯಾ ಹಾಗರಗಿ ಬಂಧನಕ್ಕೆ ಸಿಐಡಿ ಅಧಿಕಾರಿಗಳು ಸಾಕಷ್ಟು ಹುಡುಕಾಟ ನಡೆಸಿದ್ದು, ಶೀಘ್ರವೇ ಅವರ ಬಂಧನವಾಗಲಿದೆ ಎಂದು ಹೇಳಿದರು.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಸರ್ಕಾರವನ್ನು ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಅಕ್ರಮದ ಬಗ್ಗೆ ಆರೋಪ ಬಂದ ತಕ್ಷಣವೇ ಸಿಐಡಿ ತನಿಖೆಗೆ ಆದೇಶ ನೀಡಿದ್ದೇವೆ. ಈ ಪ್ರಕರಣದಲ್ಲಿ ನಾವು ನಿಸ್ಪಕ್ಷಪಾತ ತನಿಖೆ ನಡೆಸುತ್ತಿದ್ದೇವೆ. ಆದರೂ ಕಾಂಗ್ರೆಸ್‌ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು.

ಆರೋಪಿ ದಿವ್ಯಾ ಹಾಗರಗಿ ಅವರು ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಹಾಗೂ ದಿಶಾ ಸಮಿತಿ ಸದಸ್ಯೆ ಆಗಿದ್ದಾರೆ. ಅವರ ಮೇಲೆ ಅಕ್ರಮ ಆರೋಪ ಬಂದ ಕಾರಣ ಎರಡೂ ಸ್ಥಾನದಿಂದ ಪದಚ್ಯುತಿಗೊಳಿಸಲಾಗುವುದು ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ದಿವ್ಯಾ ಪತಿ ಸೇರಿ 12 ಆರೋಪಿಗಳನ್ನು ಬಂಧಿಸಲಾಗಿದೆ. ಯಾರೇ ಇದರ ಹಿಂದೆ ಇದ್ದರೂ ಅವರನ್ನು ಬಿಡುವುದಿಲ್ಲ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

Share Post