Bengaluru

ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ; ಪ್ರಿಯಾಂಕ್‌ ಖರ್ಗೆ ರಿಲೀಸ್‌ ಮಾಡಿದ ಆಡಿಯೋ ತನಿಖೆ – ಸಿಎಂ

ಬೆಂಗಳೂರು: 543 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಆಡಿಯೋ ಒಂದನ್ನು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಬಿಡುಡಗೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿಯವರು, ಆಡಿಯೋ ಬಗ್ಗೆ ನನಗೆ ಇನ್ನೂ ಗೊತ್ತಿಲ್ಲ. ಆದ್ರೆ, ಯಾವುದೇ ಸಾಕ್ಷ್ಯಗಳಿರಲಿ ಅವನ್ನು ತನಿಖೆಗೆ ಒಳಪಡಿಸುತ್ತೇವೆ. ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಿಯಾಂಕ್‌ ಖರ್ಗೆಯವರು ಯಾರೋ ಇಬ್ಬರು ಮಾತನಾಡಿರುವ ಆಡಿಯೋ ಬಿಡುಗಡೆ ಮಾಡಿದ್ದಾರೆ. ಅದ್ರಲ್ಲಿ ಮಾತನಾಡಿದವರು ಯಾರು..? ಆ ಆಡಿಯೀ ಕ್ರೆಡಿಬಿಲಿಟಿ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ. ಆ ಆಡಿಯೋವನ್ನೂ ಕೂಡಾ ತನಿಖೆಗೆ ಒಳಪಡಿಸಲಾಗುತ್ತದೆ. ಎಲ್ಲಾ ರೀತಿಯ ಸಾಕ್ಷ್ಯಗಳನ್ನೂ ತೆಗೆದುಕೊಂಡು ಸಮಗ್ರ ತನಿಖೆ ನಡೆಸುತ್ತೇವೆ ಎಂದು ಸಿಎಂ ಹೇಳಿದ್ದಾರೆ.

Share Post