ಡಿ.ರೂಪಾ ಅವರನ್ನು ಹೊಗಳಿದ ಕಿರಣ್ ಬೇಡಿ
ಬೆಂಗಳೂರು: ಅಕ್ರಮ ನಡೆದಿರುವುದರಿಂದ ಪಿಎಸ್ಐ ನೇಮಕಾತಿಗೆ ಮರುಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರಿಸುವ ಮೂಲಕ ನೊಂದ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರವು ನ್ಯಾಯ ಒದಗಿಸಿದೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನೇಮಕಾತಿ ಉಸ್ತುವಾರಿ ಹೊತ್ತಿರುವ ಹಿರಿಯ ಅಧಿಕಾರಿಗಳಿಂದ ಹಿಡಿದು ಎಲ್ಲರಿಗೂ ಅಮಾನತು ಮುಂತಾದ ಶಿಸ್ತು ಕ್ರಮ ಆದಾಗ ಮಾತ್ರ ಮುಂದೆ ಇಂತಹ ಘಟನೆ ತಡೆಯಲು ಸಾಧ್ಯ. ಇಲ್ಲವಾದಲ್ಲಿ ಅಧಿಕಾರಿಗಳು ಆಡಿದ್ದೇ ಆಟ. ಎಂದು ಡಿ.ರೂಪಾ ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾ ಅವರ ಜೈಲಿನ ಐಶಾರಾಮಿ ಬದುಕನ್ನು ಬಯಲಿಗೆಳೆದಿದ್ದ ಡಿ. ರೂಪಾ ರೀತಿಯ ಅಧಿಕಾರಿಗಳು ನಮಗೆ ಬೇಕು ಎಂದು ಮಾಜಿ ಪೊಲೀಸ್ ಅಧಿಕಾರಿ ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.