Bengaluru

ನಾಳೆ ನಡೆಯಬೇಕಿದ್ದ ಸಂಪುಟ ಸಭೆ ಮೇ 11ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ನಾಳೆ ನಡೆಯಬೇಕಿದ್ದ ಸಂಪುಟ ಸಭೆ ಮುಂದೂಡಿಕೆಯಾಗಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ನಾಳೆ ನಡೆಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ.

ನಾಳೆ ಅಂದರೆ ಗುರುವಾರ ಬೆಳಿಗ್ಗೆ 11.30ಕ್ಕೆ ರಾಜ್ಯ ಸಂಪುಟ ಸಭೆ ನಿಗದಿಯಾಗಿತ್ತು. ಆದ್ರೆ ಈಗ ಅದನ್ನು ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ‌. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಸಂಬಂದ ಬಿಜೆಪಿಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಮುಗಿಸಿದ ನಂತರವೇ ಸಂಪುಟ ಸಭೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮೇ 10ರೊಳಗೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

Share Post