ನಲವತ್ತು ಪರ್ಸೆಂಟ್ ಸರ್ಕಾರಕ್ಕೆ ಕೇಂದ್ರದ ಬೆಂಬಲವಿದೆ; ಸಿದ್ದರಾಮಯ್ಯ ಆರೋಪ
ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರ ಕಮೀಷನ್ ಸರ್ಕಾರ ಎಂಬುದು ರಾಜ್ಯದ ಜನಕ್ಕೆ ಅರ್ಥವಾಗಿದೆ. ಈ ನಲವತ್ತು ಪರ್ಸೆಂಟ್ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಪೂರ್ಣ ಬೆಂಬಲ ಸಿಕ್ಕಿದೆ. ಇದಕ್ಕೆ ಅಮಿತ್ ಷಾ ಅವರ ಹೇಳಿಕೆಯೇ ಸಾಕ್ಷಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳು ಸುರಿಮಳೆಗೈದರು.
ಕೇಂದ್ರ ಗೃಹಸಚಿವ ಅಮಿತ್ ಶಾ ಬೆಂಗಳೂರಿನಲ್ಲಿ ಮಾತನಾಡುತ್ತಾ ಬಸವರಾಜ ಬೊಮ್ಮಾಯಿಯವರಿಗೆ ಶಹಬ್ಬಾಸ್ ಹೇಳಿದ್ದಾರೆ. ಅರುಣ್ ಸಿಂಗ್ ಕೂಡಾ ಇದು ಕಾಮನ್ ಮ್ಯಾನ್ ಸರ್ಕಾರ ಎಂದು ಹೊಗಳಿಸಿದ್ದಾರೆ. ಇದನ್ನು ನೋಡಿದರೆ ರಾಜ್ಯದ ಕಮೀಷನ್ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಬೆಂಬಲವಿರುವುದು ಸ್ಪಷ್ಟವಾಗುತ್ತದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ನಾ ಖಾವೋಂಗಾ ನಾ ಖಾನೇ ದೂಂಗಾ ಎಂದು ಹೇಳುತ್ತಾರೆ ಆದರೆ, ಯಾವುದೂ ಆಚರಣೆಯಲ್ಲಿಲ್ಲ. ಭ್ರಷ್ಟರ ವಿರುದ್ಧ ಕ್ರಮ ಜರುಗಿಸಿಲ್ಲ ಎಂದು ಸಿದ್ದರಾಮಯ್ಯ ಇದೇ ವೇಳೆ ಆರೋಪಿಸಿದರು.