National

ಸದ್ಯಕ್ಕೆ ಹೊಸ ಪಕ್ಷ ಇಲ್ಲ; ಬಿಹಾರದಲ್ಲಿ 3 ಸಾವಿರ ಕಿಮೀ ಪಾದಯಾತ್ರೆಗೆ ಪ್ರಶಾಂತ್‌ ಕಿಶೋರ್‌ ತೀರ್ಮಾನ

ನವದೆಹಲಿ: ಚುನಾವಣಾ ತಂತ್ರಗಾರಿಕೆ ನಿಪುಣ ಹಾಗೂ ರಾಜಕೀಯ ಚಾಣಾಕ್ಷ ಪ್ರಶಾಂತ್‌ ಕಿಶೋರ್‌ ಹೊಸ ಪಕ್ಷ ಕಟ್ಟುವ ಬಗ್ಗೆ ಯೋಚನೆ ಮಾಡಿದ್ದರು. ಆದ್ರೆ ಈಗ ಆ ಯೋಚನೆ ಸದ್ಯಕ್ಕೆ ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ. ಬದಲಾಗಿ ಬಿಹಾರದಲ್ಲಿ 3 ಸಾವಿರ ಕಿಲೋ ಮೀಟರ್‌ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದಾರೆ.

ಅಕ್ಟೋಬರ್‌ 2ರಂದು ಬಿಹಾರದ ಪಶ್ಚಿಮ ಚಂಪಾರಣ್‌ ಗಾಂಧಿ ಆಶ್ರಮದಿಂದ 3,000 ಕಿ.ಮೀ. ಪಾದಯಾತ್ರೆ ಆರಂಭಿಸುತ್ತೇನೆ. ಬಿಹಾರದ ಬಹುತೇಕ ಭಾಗದಲ್ಲಿ ಯಾತ್ರೆ ನಡೆಸುವ ಗುರಿ ಇದೆ. ಜನರನ್ನು ಕಚೇರಿಗಳಲ್ಲಿ ಹಾಗೂ ಅವರ ಮನೆಗಳಲ್ಲಿ ನಾವು ಭೇಟಿ ಮಾಡಿ, ಅವರ ಸಮಸ್ಯೆಗಳು ಹಾಗೂ ನಿರೀಕ್ಷೆಗಳನ್ನು ತಿಳಿಯುತ್ತೇವೆ ಎಂದು ಪ್ರಶಾಂತ್ ಕಿಶೋರ್‌ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಕೂಡಾ ಮಾಡಿದ್ದಾರೆ. ಸದ್ಯಕ್ಕೆ ರಾಜಕೀಯ ಪಕ್ಷವನ್ನು ಆರಂಭಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಬಿಹಾರದ ಸಮಸ್ಯೆಗಳ ಬಗ್ಗೆ ಅರಿವಿರುವ ಸುಮಾರು 17,000ದಿಂದ 18,000 ಜನರೊಂದಿಗೆ ನಾನು ಮಾತನಾಡಲಿದ್ದೇನೆ ಹಾಗೂ ಅವರನ್ನು ಒಂದೇ ವೇದಿಕೆಯಡಿ ತರಲು ಪ್ರಯತ್ನಿಸುತ್ತೇನೆ. ಆ ಪ್ರಕ್ರಿಯೆಯನ್ನು ನಾನು ಆಗಸ್ಟ್‌ನಿಂದ ಸೆಪ್ಟೆಂಬರ್‌ ವೇಳೆಗೆ ಪೂರ್ಣಗೊಳಿಸಬೇಕಿದೆ ಎಂದಿದ್ದಾರೆ.

Share Post