ಯತ್ನಾಳ್ ಬಳಿ 2500 ಕೋಟಿ ಕೇಳಿದವರು ಯಾರು..?; ತನಿಖೆಗೆ ಆಗ್ರಹಿಸಿದ ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿ ನಾಯಕ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನಗೆ ಸಿಎಂ ಮಾಡಲು ದೆಹಲಿಯಿಂದ ಬಂದವರು 2500 ಕೋಟಿ ರೂಪಾಯಿ ಕೇಳಿದ್ದರು ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು
ಮುಖ್ಯಮಂತ್ರಿ ಮಾಡುವುದಕ್ಕಾಗಿ 2,500 ಕೋಟಿ ಕೇಳಿದವರಾರು, ಕಳುಹಿಸಿದವರಾರು ಎನ್ನುವುದನ್ನು ತನಿಖೆ ನಡೆಸಬೇಕು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಅಥವಾ ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಯತ್ನಾಳ್ ಅವರ ಹೇಳಿಕೆಯನ್ನು ಹಗುರವಾಗಿ ಪರಿಗಣಿಸಬಾರದು. ಯತ್ನಾಳ್ ಕೇಂದ್ರದ ಸಚಿವರಾಗಿದ್ದವರು. ಅಂಥವರೇ 2,500 ಕೋಟಿ ಕೇಳಿದ್ದರು ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಲು ಎಷ್ಟು ಕೊಟ್ಟಿದ್ದರು ಎಂಬುದರ ಬಗ್ಗೆಯೂ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.