ಮಥುರಾ ಬಳಿ ಭೀಕರ ಅಪಘಾತ; ಒಂದೇ ಕುಟುಂಬದ 7 ಮಂದಿ ದುರ್ಮರಣ
ಮಥುರಾ; ಮಥುರಾ ಬಳಿ ಭೀಕರ ಅಪಘಾತ ನಡೆದಿದ್ದು, ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿನ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ಹರ್ದೋಯಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೋಯ್ಡಾಕ್ಕೆ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮುಂದಿದ್ದ ವಾಹನವೊಂದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜಾಗಿದೆ. ಕಾರಿನಲ್ಲಿದ್ದ ಒಂಬತ್ತು ಮಂದಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಚಾಲಕ ಕಾರನ್ನು ಅತಿವೇಗವಾಗಿ ಚಲಾಯಿಸುತ್ತಿದ್ದ. ಈ ಕಾರಣದಿಂದಲೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮುಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಏಳು ಜನರು ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.